ಪಶು ಭಾಗ್ಯ
ದಿನಾಂಕ : 28/10/2021 -
ವಲಯ: ಪಶುಸಂಗೋಪನಾ ವಲಯ
- ವಾಣಿಜ್ಯ ಬ್ಯಾಂಕುಗಳಿಂದ ಗರಿಷ್ಠ ರೂ.1.20 ಲಕ್ಷದ ವರೆಗೆ ಸಾಲ ಪಡೆದು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಹಸು, ಕುರಿ, ಆಡು, ಹಂದಿ, ಕೋಳಿ ಘಟಕಗಳನ್ನು ಸ್ಥಾಪಿಸಲು ಪ.ಜಾ. ಮತ್ತು ಪ.ಪಂ. ದವರಿಗೆ ಶೇ.33 ಹಾಗೂ ಇತರೆ ಜನಾಂಗದವರಿಗೆ ಶೇ.25 ರಷ್ಟು ಬ್ಯಾಂಕ್ ನಿಂದ ಸಹಾಯಧನ ಒದಗಿಸಲಾಗುವುದು. (ಪ.ಜಾ. ಮತ್ತು ಪ.ಪಂ. ದವರಿಗೆ ಸಹಾಯಧನವನ್ನು ಪಶು ಭಾಗ್ಯ ಯೋಜನೆಯ ಆಡಳಿತಾತ್ಮಕ ಅನುಮೋದನೆ ಸರ್ಕಾರಿ ಆದೇಶ, ದಿನಾಂಕ 04-08-2015 ರಲ್ಲಿ ಶೇ.33 ರಿಂದ ಶೇ.50 ಕ್ಕೆ ಪರಿಷ್ಕರಿಸಲಾಗಿದೆ).
- ಬೆಳೆ ಸಾಲದ ಮಾದರಿಯಲ್ಲಿ, ಸಹಕಾರಿ ಬ್ಯಾಂಕುಗಳಿಂದ ಶೂನ್ಯ ಬಡ್ಡಿ ದರದಲ್ಲಿ ರೂ. 50,000/- ವರೆಗೆ ಪಶು ಆಹಾರ / ಇತರೆ ನಿರ್ವಹಣೆ ವೆಚ್ಚಕ್ಕಾಗಿ ಅಲ್ಪಾವಧಿ ಸಾಲ ಒದಗಿಸಲಾಗುವುದು.
- ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರುಗಳಿಗೆ 5 ರಾಸುಗಳವರೆಗೆ ವಿಮಾ ಕಂತುಗಳನ್ನು ಪಾವತಿಸಲು ಸಹಾಯಧನ ಒದಗಿಸಲಾಗುವುದು.
- ಕುರಿಗಾಹಿ ಸುರಕ್ಷಾ ಯೋಜನೆಯಡಿ ನೀಡುತ್ತಿರುವ ರೂ.5,000/- ಪರಿಹಾರ ಧನವನ್ನು (exgratia) ಮುಂದುವರೆಸಲಾಗುವುದು. ಈ ಕಾರ್ಯಕ್ರಮಕ್ಕೆ ರೂ.5.00 ಕೋಟಿ ಅನುದಾನವನ್ನು ನೀಡಲಾಗುವುದು
ಫಲಾನುಭವಿ:
ಸಣ್ಣ ಮತ್ತು ಅತಿ ಸಣ್ಣ ರೈತರು, ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರು
ಪ್ರಯೋಜನಗಳು:
ಹಸು, ಕುರಿ, ಆಡು, ಹಂದಿ, ಕೋಳಿ ಘಟಕಗಳನ್ನು ಸ್ಥಾಪಿಸಲು ಸಹಾಯಧನ, 5 ರಾಸುಗಳವರೆಗೆ ವಿಮಾ ಕಂತುಗಳನ್ನು ಪಾವತಿಸಲು ಸಹಾಯಧನ
ಅರ್ಜಿ ಸಲ್ಲಿಸುವ ವಿಧಾನ
ದಯವಿಟ್ಟು ಹತ್ತಿರದ ಪಶುಪಾಲನಾ ಕಚೇರಿಗೆ ಭೇಟಿ ನೀಡಿ